ಆಳ್ವಾಸ್‍ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿದ್ಯಾಗಿರಿ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಸಂಸ್ಥೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ದೀಪ ಬೆಳಗುವ ಮೂಲಕ ಯೋಗಾಭ್ಯಾಸಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಎರಡು ಸಾವಿರ ವಿದ್ಯಾರ್ಥಿಗಳು ಏಕಕಾಲದಲ್ಲಿ ಯೋಗಾಭ್ಯಾಸ ಮಾಡಿದರು. ಪ್ರಾಣಾಯಾಮ, ಆಸನ, ಧ್ಯಾನ, ವಿಶ್ರಾಂತಿ ಯೋಗಗಳನ್ನು ವಿದ್ಯಾರ್ಥಿಗಳು ಮಾಡಿದರು. ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ಯೋಗಾಭ್ಯಾಸ ನಡೆಯಿತು. ಈ ಹಿಂದೆ ಯೋಗಾಥಾನ್ ಹಾಗೂ ಜಾಂಬೂರಿ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗಾಭ್ಯಾಸ ಮಾಡಿ ಗಮನ ಸೆಳೆದಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.



















































































error: Content is protected !!
Scroll to Top