ಮಿಯ್ಯಾರು : ಶ್ರೀ.ಕ್ಷೇ.ಧ.ಗ್ರಾ.ಯೋ. ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ

ಕಾರ್ಕಳ : ಶ್ರೀ.ಕ್ಷೇ.ಧ.ಗ್ರಾ.ಯೋ. ಬಿ. ಸಿ. ಟ್ರಸ್ಟ್‌ನ ವತಿಯಿಂದ ಮಿಯ್ಯಾರು ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಜರುಗಿತು. ಎಸ್‌ಡಿಎಂಸಿ ಅಧ್ಯಕ್ಷ ಅಶೋಕ್ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಾಳ ಆರತಿ ಅವರು, ಸಕಲ ಜೀವರಾಶಿಗಳ ಅಸ್ತಿತ್ವ ಪರಿಸರ. ಪರಿಸರವಿಲ್ಲದೆ ನಾವಿಲ್ಲ. ಎಳವೆಯಿಂದಲೇ ಪರಿಸರ ಕಾಳಜಿ ಬೆಳೆಸಿಕೊಂಡಲ್ಲಿ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬಹುದು. ಈ ನಿಟ್ಟಿನಲ್ಲಿ ಶಾಲಾ ದಿನಗಳಲ್ಲೇ ಪರಿಸರ ಸಂರಕ್ಷಣೆ ಕುರಿತಾದ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದು ಅವಶ್ಯ ಎಂದು ಪರಿಸರ ಜಾಗೃತಿ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಬಹುಮಾನ ವಿತರಣೆ
ಪರಿಸರ ಸಂಬಂಧಿಸಿದಂತೆ ಮಕ್ಕಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ತಾಲೂಕು ಯೋಜನಾಧಿಕಾರಿ ಹೇಮಲತಾ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ವಿನೋದ್‌ ನಾಯಕ್‌ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸುಜಾತಾ ಸ್ವಾಗತಿಸಿ, ವಲಯದ ಮೇಲ್ವಿಚಾರಕಿ ಯಶೋಧ ಪ್ರಾಸ್ತವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ಶೋಭಾ ಕಾರ್ಯಕ್ರಮ ನಿರೂಪಿಸಿ. ಗುಲಾಬಿ ವಂದಿಸಿದರು. ಸೇವಾ ಪ್ರತಿನಿಧಿ ಸುರೇಖಾ ಸಹಕರಿಸಿದರು.





























































































































error: Content is protected !!
Scroll to Top