ಬೆಂಗಳೂರು : ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಎನ್.ಚಲುವರಾಯಸ್ವಾಮಿ, S.S.ಮಲ್ಲಿಕಾರ್ಜುನ, ಕೆ.ಎನ್.ರಾಜಣ್ಣ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ನೀತಿ ನಿರೂಪಣೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಿದೆ. ಕೆಲವೆಡೆ ಪ್ರಾಕೃತಿಕ ವಿಕೋಪಗಳಿಂದಾಗಿ ಸಾವು ಸಂಭವಿಸಿತ್ತಿವೆ. ಈ ಮಧ್ಯೆ, ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮಾಡಿದ್ದರು.
ಸಿಡಿಲು, ಆಳಿಕಲ್ಲು ಮಳೆಯಿಂದಾಗಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು ಎಂದು ಹೇಳಿದ್ದರು. ಯಾವುದೇ ರೀತಿಯ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಕರ್ತವ್ಯ ಲೋಪವಾಗಂದತೆ ಸೂಚನೆ ನೀಡಿದ್ದರು.

ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಕೊಳ್ಳಬೇಕು, ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಈ ಹಿಂದೆ ತಿಳಿಸಿದ್ದರು.





































