ಸೆಪ್ಟೆಂಬರ್‌ವರೆಗೆ ಪರಶುರಾಮ ಥೀಂ ಪಾರ್ಕ್‌ ಭೇಟಿಗೆ ನಿಷೇಧ

ಪರಶುರಾಮ ಮೂರ್ತಿಗೆ ಸಿಡಿಲು ನಿರೋಧಕ ಅಳವಡಿಕೆ

ಕಾರ್ಕಳ : ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್‌ನಲ್ಲಿರುವ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕ ಅಳವಡಿಕೆ, ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಜೂ. 26 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಪರಶುರಾಮ ರ್ಥೀಂ ಪಾರ್ಕ್‌ಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ಕಾರ್ಕಳ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











































































error: Content is protected !!
Scroll to Top