ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಯುವಕ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರ್ಗಾನ ಗ್ರಾಮದ ರಾಜೀವ ನಗರ ಕಾಲೋನಿಯಲ್ಲಿ ಸಂಭವಿಸಿದೆ. ಮಂಜುನಾಥ್‌ ಪೂಜಾರಿ (35) ಎಂಬವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಜೂ. 22ರ ರಾತ್ರಿ ಮನೆಯ ಕೋಣೆಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಜೂ. 23ರ ಬೆಳಗ್ಗೆ ಗಮನಕ್ಕೆ ಬಂದಿರುತ್ತದೆ. ಇವರು ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































































































error: Content is protected !!
Scroll to Top