ಕಾರ್ಕಳ : ಮಂಗಳೂರಿನಿಂದ ಶೃಂಗೇರಿ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣ ಶಾಸಕ ಪಂಜುಗುಳಿ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಶನಿವಾರ ಮಿಯ್ಯಾರು ಸೇತುವೆ ಬಳಿ ಸಂಭವಿಸಿದೆ. ಮುಡಾರು- ನಲ್ಲೂರು ಕ್ರಾಸ್ ಬಳಿ ವೇಗವಾಗಿ ಸಾಗುತ್ತಿದ್ದ ಕಾರಿನ ಟಯರ್ ಏಕಾಏಕಿ ಸ್ಫೋಟಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ವಾಹನದಲ್ಲಿದ್ದ ಶಾಸಕರು ಪಾರಾಗಿದ್ದಾರೆ. ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ಮಧ್ಯೆ ಸಿಲುಕಿದ ಜೀಪು ಜಖಂಗೊಂಡಿದೆ. ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಪ್ರತ್ಯೇಕ ವಾಹನದಲ್ಲಿ ಶಾಸಕರು ಶೃಂಗೇರಿ ಕಡೆಗೆ ಪ್ರಯಾಣಿಸಿದ್ದಾರೆ.






























