ಬಳ್ಳಾರಿ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ. 2019ರಲ್ಲಿ ಆ. 20ರಂದು ನಳಿನ್ ಕುಮಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದರು.
ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರರೂಢ ಬಿಜೆಪಿ 66 ಸ್ಥಾನ ಮಾತ್ರ ಪಡೆಯುವಲ್ಲಿ ಶಕ್ತವಾಗಿತ್ತು. 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಿದ್ದು, ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ರಾಜ್ಯಾಧ್ಯಕ್ಷ ಹುದ್ದೆಯಲ್ಲಿದ್ದ ನಳಿನ್ ಕುಮಾರ್ ರಾಜೀನಾಮೆ ನೀಡಿರುವುದರಿಂದ ಮುಂದಿನ ಆಯ್ಕೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ


































