ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಕಜ್ಕೆ ಶಾಖಾ ಮಠದ ಸ್ವಾಮೀಜಿ ಭೇಟಿ

ಕರಾವಳಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳ ನಾಡು – ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ

ಕಾರ್ಕಳ : ಕರಾವಳಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳ ನಾಡು. ಕಳೆದ 25 ವರುಷಗಳಿಂದ ಕರಾವಳಿಯ ದೇವಸ್ಥಾನಗಳ ದರುಶನ ಮಾಡಿಕೊಂಡು ಬಂದಿರುತ್ತೇನೆ. ಮುಂದೊಂದು ದಿನ ಹೆಬ್ರಿ ತಾಲೂಕಿನ ಕಜ್ಕೆ ಶಾಖಾಮಠದ ಅನ್ನಪೂರ್ಣೇಶ್ವರಿ ಸಾನಿಧ್ಯವೂ ಪ್ರಸಿದ್ಧ ಕ್ಷೇತ್ರವಾಗಿ ಮೂಡಿಬರಲಿದೆ ಎಂದು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಕಜ್ಕೆ ಶಾಖಾಮಠದ ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ನುಡಿದರು.
ಅವರು ತಮ್ಮ 41ನೇ ಚಾತುರ್ಮಾಸ್ಯ ವೃತಾನುಷ್ಠಾನದ ಪೂರ್ವಭಾವಿಯಾಗಿ ಕ್ಷೇತ್ರ ದರ್ಶನದ ಪ್ರಯಕ್ತ ಜೂ. 26 ರಂದು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಸಂದರ್ಭ ಆಶೀರ್ವಚನ ನೀಡಿದರು.

ಜು. 2ರಂದು ಪುರ ಮೆರವಣಿಗೆ
ಚಾತುರ್ಮಾಸ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಲ್ಗೋಳಿ ವಿಶ್ವನಾಥ ಆಚಾರ್ಯ ಮಾತನಾಡಿ, ಜು. 2ರಿಂದ ಸೆ. 29ರವರೆಗೆ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವೃತಾನಿಷ್ಠಾನವು ನಡೆಯಲಿರುವುದು. ಜು. 2ರಂದು ಪುರ ಮೆರವಣಿಗೆ ಮತ್ತು ಹೊರೆಕಾಣಿಕೆಯು ಹೆಬ್ರಿ ಶ್ರೀ ವಿಶ್ವಕರ್ಮ ಸಮುದಾಯ ಭವನದಿಂದ ಕಜ್ಕೆ ಮಠಕ್ಕೆ ಸಾಗಲಿದೆ. ಪೂರ್ವಾಹ್ನ 11 ಗಂಟೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವುದು. ಎಸ್‌ಕೆಎಫ್‌ ಆಡಳಿತ ನಿರ್ದೇಶಕ ಡಾ. ಜಿ. ರಾಮಕೃಷ್ಣ ಆಚಾರ್‌ ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬೇಲೂರು ವೇದಾಧ್ಯಾಯಿ ಸಂಸ್ಕೃತಾಧ್ಯಾಪಕ ವೇಲಾಪುರೀ ವಿಶ್ವನಾಥ ಶರ್ಮ ಧಾರ್ಮಿಕ ಉಪನ್ಯಾಸ ನೀಡಲಿರುವರು ಎಂದು ತಿಳಿಸಿದರು.
ದೇವಸ್ಥಾನದ ಜೊತೆ ಮೊಕ್ತೇಸರರಾದ ಪಿ. ರವಿ ಆಚಾರ್ಯ, ನಿಟ್ಟೆ ಸುರೇಶ್‌ ಆಚಾರ್ಯ, ಪ್ರಧಾನ ಅರ್ಚಕ ವಿಠಲ ಪುರೋಹಿತ್‌, ಕಜ್ಕೆ ಶಾಖಾ ಮಠದ ಚಾತುರ್ಮಾಸ್ಯ ನಿರ್ವಹಣಾ ಸಮಿತಿಯ ಸದಸ್ಯರು, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಭಜನಾ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಮಹಿಳಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು, ವಿವಿಧ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಜೊತೆ ಮೊಕ್ತೇಸರರಾದ ಪಿ. ರವಿ ಆಚಾರ್ಯ, ನಿಟ್ಟೆ ಸುರೇಶ್‌ ಆಚಾರ್ಯ, ಪ್ರಧಾನ ಅರ್ಚಕ ವಿಠಲ ಪುರೋಹಿತ್‌, ಕಜ್ಕೆ ಶಾಖಾ ಮಠದ ಚಾತುರ್ಮಾಸ್ಯ ನಿರ್ವಹಣಾ ಸಮಿತಿಯ ಸದಸ್ಯರು, ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಭಜನಾ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಮಹಿಳಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು, ವಿವಿಧ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಸ್ವಾಗತಿಸಿ, ಸುರೇಶ್‌ ಆಚಾರ್ಯ ನಿರೂಪಿಸಿ, ವಂದಿಸಿದರು.































































error: Content is protected !!
Scroll to Top