ಕಾರ್ಕಳ : ನಶಾ ಮುಕ್ತ ಭಾರತ ಅಭಿಯಾನದಡಿಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಾಣೆ ವಿರೋಧಿ ದಿನಾಚರಣೆಯನ್ನು ಸಾಣೂರು ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾರ್ಕಳ ನಗರ ಪೋಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಮಾತನಾಡಿ, ಮಾದಕ ವಸ್ತುಗಳಿಂದ ನಾವು ದೂರವಿರಬೇಕು. ನಮ್ಮ ಜೀವನ ನಮ್ಮ ಕೈಯಲ್ಲೇ ಇದೆ. ಮಾದಕ ವ್ಯಸನದಿಂದಾಗುವ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳು ತಿಳಿದುಕೊಂಡು ಸಮಾಜದಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕೆಂದರು.
ಪ್ರಾಂಶುಪಾಲೆ ಸುಚೇತ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿಗಳಾದ ಸೌಮ್ಯ ಆಚಾರ್ಯ ಹಾಗೂ ಸೌಮ್ಯ ಮಾದಕ ದ್ರವ್ಯ ವ್ಯಸನದ ಕುರಿತು ಮಾತನಾಡಿದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಂಪ್ರೀತ ಮತ್ತು ಅನುಷಾ ಪ್ರಾರ್ಥಿಸಿದರು. ಕೃಪಾ ಕಾರ್ಯಕ್ರಮ ನಿರೂಪಿಸಿ, ದೀಪ್ತಿ ವಂದಿಸಿದರು.
ಸಾಣೂರು ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ































