ಬೆಳ್ಮಣ್ : ಬೆಳ್ಮಣ್ ಚರ್ಚ್ ಮತ್ತು ಮಂಗಳೂರಿನ ಫಾದರ್ ಮುಲ್ಲಾರ್ಸ್ ಆಸ್ಪತ್ರೆಯ ಸಹಕಾರದೊಂದಿಗೆ ಬೆಳ್ಮಣ್ ಸಂತ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಜೂ.20-21ರಂದು ನಡೆಸಲಾಯಿತು. ಫಾದರ್ ಮುಲ್ಲಾರ್ಸ ಆಸ್ಪತ್ರೆಯ ನುರಿತ ಮಕ್ಕಳ ಮತ್ತು ಕಣ್ಣಿನ ತಜ್ಞರು ಶಿಬಿರದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ತಪಾಸಣೆ ನಡೆಸಿ ಅಗತ್ಯವಿರುವ ಸಲಹೆ ಸೂಚನೆಗಳನ್ನು ನೀಡಿದರು. ಶಾಲಾ ಸಂಚಾಲಕ ಫಾದರ್ ಫ್ರೆಡ್ರಿಕ್ ಮಸ್ಕರೇನ್ಹಸ್ ಅವರು ಕಣ್ಣಿನ ದೃಷ್ಟಿಯ ಮಹತ್ವ ಹಾಗೂ ಉತ್ತಮ ಆರೋಗ್ಯದ ಬಗ್ಗೆ ಮಾತನಾಡಿ, ಆಸ್ಪತ್ರೆಯ ಸಿಬ್ಬಂದಿಗಳ ಸೇವೆಯನ್ನು ಶ್ಲಾಘಿಸಿದರು.
ಬೆಳ್ಮಣ್ ಸಂತ ಜೋಸೆಫ್ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ









































