ಜೂ. 30ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿಯವರ ದ್ವಿತೀಯ ವರ್ಷದ ಆರಾಧನಾ ಮಹೋತ್ಸವ
ಹೆಬ್ರಿ : ಮುದ್ರಾಡಿ ಅಭಯಸ್ತೆ ಆದಿಶಕ್ತಿ ಮತ್ತು ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ಜೂ. 30ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿಯವರ ದ್ವಿತೀಯ ವರ್ಷದ ಆರಾಧನಾ ಮಹೋತ್ಸವ ಜರುಗಲಿದೆ.
ಬೆಳಿಗ್ಗೆ 7 ಗಂಟೆಯಿಂದ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ. ಸಂಜೆ 6 ಗಂಟೆಗೆ ಧರ್ಮಯೋಗಿ ಸಮ್ಮಾನ್ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾಪನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕಾರ್ಕಳ ವಿಧಾನ ಸಭಾ ಕ್ಷೇತ್ರ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮುಂಬೈ ಹೇರಂಭ ಇಂಡಸ್ಟ್ರೀಯ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಧರ್ಮಯೋಗಿ ಸಮ್ಮಾನ ಪುರಸ್ಕಾರ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ವಾಸ್ತುತಜ್ಞ ಪ್ರಮಲ್ ಕುಮಾರ್, ಉದ್ಯಮಿ ಸುಂದರ್ ಕುಮಾರ್, ಉಡುಪಿ ಆದರ್ಶ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಚಂದ್ರಶೇಖರ್, ತುಳುವರ್ಲಡ್ ಅಧ್ಯಕ್ಷ ರಾಜೇಶ್ ಆಳ್ವ ಮತ್ತು ಮುದ್ರಾಡಿ ಗ್ರಾ. ಪಂ. ಸದಸ್ಯ ಗಣಪತಿ ಎಂ. ಉಪಸ್ಥಿತರಿರಲಿದ್ದಾರೆ. ರಾತ್ರಿ 7 ಗಂಟೆಗೆ ತುಳು ಹಾಸ್ಯಮಯ ನಾಟಕ ನಾಯಿದ ಬೀಲ ಪ್ರದರ್ಶನಗೊಳ್ಳಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಸುಕುಮಾರ್ ಮೋಹನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.










































