ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ : ಮಾರ್ಗ ಮಧ್ಯೆ ಸಿಲುಕಿದ ಯಾತ್ರಿಗಳು

ಬದ್ರಿನಾಥ್ : ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ಉತ್ತರಾಖಂಡ್ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಯಾತ್ರೆ ಕೈಗೊಂಡಿದ್ದರು.

ರಸ್ತೆಯಲ್ಲಿ ಅವಶೇಷಗಳ ರಾಶಿ ಬಿದ್ದಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಅವಶೇಷಗಳನ್ನು ತೆರವುಗೊಳಿಸಲು ಮತ್ತು ಮಾರ್ಗದಲ್ಲಿ ಸಂಚಾರವನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಚಿಮೋಲಿ ಆಡಳಿತವು ಸಿಕ್ಕಿಬಿದ್ದ ಯಾತ್ರಾರ್ಥಿಗಳಿಗೆ ಕುಡಿಯುವ ನೀರು ಮತ್ತು ತಿಂಡಿಗಳನ್ನು ವಿತರಿಸಿದೆ.























































error: Content is protected !!
Scroll to Top