ರಾಹುಲ್‌ ಗಾಂಧಿ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಕೋರ್ಟ್‌ ನಕಾರ

ಕೃತಿಸ್ವಾಮ್ಯ ಹಕ್ಕು ಉಲ್ಲಂಘನೆಯಾಗಿದೆ ಎಂದ ನ್ಯಾಯಾಲಯ

ಬೆಂಗಳೂರು: ಭಾರತ್ ಜೋಡೊ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 ಹಾಡನ್ನು ನಕಲು ಮಾಡಿ ಕೃತಿಸ್ವಾಮ್ಯ ಹಕ್ಕು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನತೆ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.


ಎಫ್ಐಆರ್ ರದ್ದು ಕೋರಿ ಮೂವರು ಕಾಂಗ್ರೆಸ್ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಜೂ.28ರಂದು ವಜಾಗೊಳಿಸಿದೆ. ಅರ್ಜಿದಾರರು ಅನುಮತಿಯಿಲ್ಲದೆ ಮೂಲ ಕೋಡ್ ಅನ್ನು ತಿದ್ದಿದ್ದಾರೆಂದು ತೋರುತ್ತದೆ ಮತ್ತು ಇದು ನಿಸ್ಸಂದೇಹವಾಗಿ ಕಂಪನಿಯ ಕಾಪಿರೈಟ್ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.


ಭಾರತ್ ಜೋಡೊ ಯಾತ್ರೆ ಕರ್ನಾಟಕಕ್ಕೆ ಆಗಮಿಸಿದ್ದ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಹಾಗೇ ಹರಿಬಿಟ್ಟ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​…’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ ಎಂ.ನವೀನ್ ಕುಮಾರ್ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಾಡಿನ ಕಾಪಿರೈಟ್ ಉಲ್ಲಂಘಿಸಿಲಾಗಿದೆ ಎಂದು ಆರೋಪಿಸಿದ್ದಾರೆ.





























































































































error: Content is protected !!
Scroll to Top