ಕಾರ್ಕಳ : ಎಸ್ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಬೋಳ ಸುರೇಂದ್ರ ಕಾಮತ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಮತ್ತು ಅಮ್ಮನ ನೆರವು ಟ್ರಸ್ಟ್ ವತಿಯಿಂದ ಬ್ಯಾಗ್ ಮತ್ತು ಪುಸ್ತಕಗಳನ್ನು ಇತ್ತೀಚಿಗೆ ವಿತರಿಸಲಾಯಿತು. ಬೋಳ ಸುರೇಂದ್ರ ಕಾಮತ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ನ ಬೋಳ ರಾಹುಲ್ ಕಾಮತ್ ಮತ್ತು ಅಮ್ಮನ ನೆರವು ಟ್ರಸ್ಟ್ ನ ಅವಿನಾಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭ ಎಸ್.ವಿ ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಐ. ರವೀಂದ್ರನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಂಶುಪಾಲ ರಾಮದಾಸ್ ಪ್ರಭು ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕ ಯೋಗೇಂದ್ರ ನಾಯಕ್ ಸ್ವಾಗತಿಸಿದರು. ಶಿಕ್ಷಕರಾದ ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿ, ಸುನಿಲ್ ಎಸ್. ಶೆಟ್ಟಿ ವಂದಿಸಿದರು.
ಎಸ್ವಿಟಿ : ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ






























































