ಮುಂದಿನ ವರ್ಷದಿಂದ ಹೆಚ್ಚು ಅನುದಾನ ಮೀಸಲಿಡುವ ಆಶ್ವಾಸನೆ
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರಕಾರ ರೂಪಿಸಿದ್ದ ಎಲ್ಲ ಭಾಗ್ಯಗಳನ್ನು ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಸ್ಲಿಮರ ಅಭಿವೃದ್ಧಿ ವಿಚಾರವನ್ನು ಚರ್ಚಿಸಿದೆ. ಈ ಸಂದರ್ಭ ಸಿದ್ದರಾಮಯ್ಯ ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಮುಸ್ಲಿಂ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಬೇಕು ಎಂದು ನಿಯೋಗ ಸಿಎಂಗೆ ಮನವಿ ಮಾಡಿತು.









































