ಬಸ್‌ಗೆ ಬೆಂಕಿ ಹತ್ತಿಕೊಂಡು 25 ಪ್ರಯಾಣಿಕರು ಸಜೀವ ದಹನ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದಾಗ ಹತ್ತಿಕೊಂಡ ಬೆಂಕಿ

ಮುಂಬಯಿ : ಮುಂಬಯಿ-ನಾಗಪುರ ಹೆದ್ದಾರಿಯಲ್ಲಿ ಬುಲ್ಡಾನ ಸಮೀಪ ಖಾಸಗಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹತ್ತಿಕೊಂಡು 25 ಪ್ರಯಾಣಿಕರು ಸಜೀವ ದಹಿಸಿ ಹೋಗಿದ್ದಾರೆ. ಯವತ್ಮಾಲ್‌ನಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ ಬುಲ್ಡಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಹೋಗುತ್ತಿರುವಾಗ ಡಿವೈಡರ್​ಗೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡಿದೆ. 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಸುಮಾರು 33 ಪ್ರಯಾಣಿಕರಿದ್ದರೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹೋಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಬಸ್​ ಅಪಘಾತವಾದಾಗ ಎಲ್ಲ ಪ್ರಯಾಣಿಕರು ಗಾಢ ನಿದ್ದೆಯಲ್ಲಿದ್ದರು. ಡಿವೈಡರ್‌ಗೆ ಡಿಕ್ಕಿ ಹೊಡೆದು ಏನಾಗುತ್ತಿದೆ ಎಂದು ನೋಡುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ರಾತ್ರಿ 2 ಗಂಟೆ ಹೊತ್ತಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಬಸ್ಸಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸ್ಸಿನಲ್ಲಿ 33 ಪ್ರಯಾಣಿಕರಿದ್ದರು. 25 ಸುಟ್ಟು ಕರಕಲಾಗಿದ್ದ ದೇಹಗಳನ್ನು ಅಗ್ನಿಶಾಮಕ ಪಡೆ ನೆರವಿನಿಂದ ಪೊಲೀಸರು ಹೊರ ತೆಗೆದಿದ್ದಾರೆ. 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬುಲ್ಡಾಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಟಯರ್‌ ಸ್ಫೋಟಗೊಂಡ ಪರಿಣಾಮವಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ ಪಲ್ಟಿಯಾದಾಗ ಬೆಂಕಿ ಹತ್ತಿಕೊಂಡಿದೆ. ರಾತ್ರಿ ಭಾರಿ ವೇಗದಿಂದ ಬಸ್‌ ಚಲಿಸುತ್ತಿತ್ತು ಎನ್ನಲಾಗಿದೆ.



















































































error: Content is protected !!
Scroll to Top