ಮಾಳ ಗುರುಕುಲ ಅನುದಾನಿತ ಶಾಲೆಯಲ್ಲಿ ಸಾಂಕ್ರಮಿಕ ರೋಗಗಳ ಕುರಿತು ಮಾಹಿತಿ ಕಾರ್ಯಕ್ರಮ

ಕಾರ್ಕಳ : ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 1 ರಂದು ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ವೈದ್ಯಾಧಿಕಾರಿ ಡಾ. ದಿಶಾ, ಮಲೇರಿಯಾ, ಡೆಂಗ್ಯೂ ಹಾಗೂ ಮೊದಲಾದ ಸಾಂಕ್ರಾಮಿಕ ರೋಗಗಳ ಲಕ್ಷಣಗಳನ್ನು ತಿಳಿಸಿ ಅವುಗಳನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ವೈದ್ಯಕೀಯ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಂದ ವೈದ್ಯರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ಸಹಾಯಕಿ ನಂದಿನಿ, ಆಶಾ ಕಾರ್ಯಕರ್ತೆ ವಿನುತಾ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶಿಕ್ಷಕಿ ರಕ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.



















































error: Content is protected !!
Scroll to Top