ಸ್ವೀಜರ್‌ಲ್ಯಾಂಡ್ : ಲೌಸನ್ನೆ ಡೈಮಂಡ್ ಲೀಗ್ನಲ್ಲಿ 87.66 ಮೀ. ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಗೆದ್ದಿದ್ದಾರೆ. ಈ ವರ್ಷ ನೀರಜ್ ಅವರಿಗೆ ಇದು ಎರಡನೇ ಚಿನ್ನದ ಪದಕವಾಗಿದೆ. ಇದಕ್ಕೂ ಮೊದಲು ಮೇ ತಿಂಗಳಲ್ಲಿ ದೋಹಾದಲ್ಲಿ ನಡೆದ ಡೈಮಂಡ್ ಲೀಗ್ನಲ್ಲಿ 88.67 ಮೀಟರ್ ದೂರ ಜಾವೆಲಿನ್ ಎಸೆದಿದ್ದ ನೀರಜ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

87.66 ಮೀಟರ್ ದೂರ ಎಸೆದು ಪ್ರಶಸ್ತಿ ಗೆದ್ದ ನೀರಜ್ ಅವರಿಗೆ ಇದು ಎಂಟನೇ ಅಂತಾರಾಷ್ಟ್ರೀಯ ಚಿನ್ನದ ಪದಕವಾಗಿದೆ. ಇದಕ್ಕೂ ಮುನ್ನ ಅವರು ಏಷ್ಯನ್ ಗೇಮ್ಸ್, ಸೌತ್ ಏಷ್ಯನ್ ಗೇಮ್ಸ್, ಒಲಿಂಪಿಕ್ ಗೇಮ್ಸ್ ಮತ್ತು ಡೈಮಂಡ್ ಲೀಗ್‌ನಂತಹ ಪಂದ್ಯಾವಳಿಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದರು.

































































