ಕಾರ್ಕಳ : ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾದ ಆಶ್ರಯದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಜು. 2ರಂದು 9 ಗಂಟೆಗೆ ಪೆರ್ವಾಜೆ ವಿಶ್ವಕರ್ಮ ಸಮಾಜ ಭವನದಲ್ಲಿ ಜರುಗಲಿರುವುದು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭುವನೇಂದ್ರ ಪ್ರೌಢಶಾಲೆಯ ಶಿಕ್ಷಕ ಗಣೇಶ್ ಜಾಲ್ಸೂರ್ ಭಾಗವಹಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ವಿಬಿಎಸ್ ಸಭಾದ ಅಧ್ಯಕ್ಷ ಬಿ. ಪ್ರಕಾಶ್ ಆಚಾರ್ಯ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಉಪಸ್ಥಿತರಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜು. 2 : ವಿಬಿಎಸ್ ಸಭಾದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

































































