ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್

ಮುಂಬೈ : ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಜು. 3ರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದಾರೆ. ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿದ್ದ ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಅವರ ಸ್ಥಾನ ತಟ್ಕರೆ ಅವರನ್ನು ನೇಮಕ ಮಾಡಲಾಗಿದೆ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ. ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ವಿರುದ್ಧ ಬಂಡಾಯವೆದ್ದ ಅಜಿತ್ ಪವಾರ್ ಪರ ನಿಂತ ಪ್ರಫುಲ್ ಪಟೇಲ್ ಮತ್ತು ತಟ್ಕರೆ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದರು. ಕಳೆದ ತಿಂಗಳು ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಜ್ಯಸಭಾ ಸದಸ್ಯ ಪಟೇಲ್ ಅವರು ಮುಂಬೈನಲ್ಲಿ ಪತ್ರಿಕಾಗೋಷ್ಠಿಯ ನಡೆಸಿ, ತಟ್ಕರೆ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಜಯಂತ್ ಪಾಟೀಲ್ ಅವರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.











































































error: Content is protected !!
Scroll to Top