ಬ್ಯಾಂಕಿನಲ್ಲಿದೆ 1 ಸಾವಿರ ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15

ಮುಂಬಯಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಮ್ಯಾನೇಜರ್‌ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವೆಬ್​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರ

ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಸಂಖ್ಯೆ: 1,000
ಉದ್ಯೋಗ ಸ್ಥಳ: ಭಾರತ ಎಲ್ಲೆಡೆ
ಹುದ್ದೆಯ ಹೆಸರು: ಮ್ಯಾನೇಜರ್ (ಮೈನ್​​ಸ್ಟ್ರೀಮ್)

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ , CAIIB ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ

ಅಭ್ಯರ್ಥಿಯ ವಯಸ್ಸು 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ,
PWBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-07-2023
ವೆಬ್‌ಸೈಟ್: centralbankofindia.co.in





























































































































error: Content is protected !!
Scroll to Top