ಚಿಕ್ಕಬಳ್ಳಾಪುರ : ಶಕ್ತಿ ಯೋಜನೆಯಡಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಬಹುತೇಕ ಎಲ್ಲಾ ಬಸ್ಗಳು ಫುಲ್ ಆಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಹೋಗಿ ಬರುವುದಕ್ಕೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಪುಟ್ಬೋಡ್ ಮೇಲೆ ನಿಂತುಕೊಂಡು ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಜಾತವಾರದ ಹೊಸಹಳ್ಳಿ ಗೇಟ್ ಬಳಿ ಚಲಿಸುತ್ತಿದ್ದ ಸಾರಿಗೆ ಬಸ್ನಿಂದ ವಿದ್ಯಾರ್ಥಿನಿಯೋರ್ವಳು ಕೆಳಗೆಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ; ಪ್ರಾಣಾಪಾಯದಿಂದ ಪಾರು





































