ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ : ಕಲಾಪ ಅಪರಾಹ್ನಕ್ಕೆ ಮುಂದೂಡಿಕೆ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಜು. 4ರಂದು ಮಂಗಳವಾರ ಬೆಳಗ್ಗೆ ವಿಧಾನಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ ಸ್ಪೀಕರ್ ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು.

ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಾತಿಗೆ ತೃಪ್ತರಾಗದ ಬಿಜೆಪಿ ಶಾಸಕರು ಸದನದ ಬಾವಿಗೆ ನುಗ್ಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸ್ಪೀಕರ್ ಅವರು ಎಷ್ಟೇ ಮನವಿ ಮಾಡಿಕೊಂಡರೂ ಕೇಳಲಿಲ್ಲ. ಇದರಿಂದ ಸ್ಪೀಕರ್ ಯು. ಟಿ. ಖಾದರ್ ಕಲಾಪವನ್ನು ಕೆಲ ಹೊತ್ತಿಗೆ ಮುಂದೂಡಿದರು.











































































error: Content is protected !!
Scroll to Top