ಬೆಂಗಳೂರು : ಮಾಜಿ ಸಚಿವ, ಹಾಲಿ ಶಾಸಕ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ ಹೆಚ್ಚು ಪೊಲೀಸರನ್ನು ವರ್ಗಾವಣೆ ಮಾಡುವಂತೆ ಕೋರಿ ಐಜಿಪಿಗೆ ಬರೆದಿರುವ ಪತ್ರ ವೈರಲ್ ಆಗಿದೆ. ವರ್ಗಾವಣೆಯಾಗಬೇಕಾದ ಪೊಲೀಸ್ ಅಧಿಕಾರಿಗಳ ಹೆಸರು, ವರ್ಗಾಯಿಸಬೇಕಾದ ಸ್ಥಳ ನಮೂದಿಸಿರುವುದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸುವ ವರ್ಗಾವಣೆ ದಂಧೆಗೆ ಪುಷ್ಟಿ ನೀಡುವಂತಿದೆ. ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಲೋಕೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ಧ ಪ್ರತಿಪಕ್ಷದ ನಾಯಕರು ಕಿಡಿಕಾರಿದ್ದಾರೆ. ರಾಯರೆಡ್ಡಿ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸವರಾಜ ರಾಯರೆಡ್ಡಿ ಅವರ ಹೆಸರಿನ ಲೆಟರ್ ಹೆಡ್‌ನಲ್ಲಿಯೇ ಪತ್ರ ಬರೆಯಲಾಗಿದ್ದು, ಕೊಪ್ಪಳ ಜಿಲ್ಲೆಯ 25 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ತಮ್ಮ ಕ್ಷೇತ್ರದ ಕುಕನೂರು ಮತ್ತು ಯಲಬುರ್ಗಾ ಪೊಲೀಸ್ ಠಾಣೆ ಜೊತೆಗೆ ಕೊಪ್ಪಳ, ಗಂಗಾವತಿ, ಕುಷ್ಟಗಿ ತಾಲೂಕುಗಳ ಪೊಲೀಸರನ್ನು ಕೂಡ ವರ್ಗಾವಣೆ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.
25 ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಶಾಸಕರ ಲೆಟರ್ – ವೈರಲ್





































