ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ

ಬೆಂಗಳೂರು : ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಜು. 6ರಂದು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಪ್ರಕಟಿಸಿದರು.

ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ ಲಮಾಣಿ ಅವರ ಹೆಸರನ್ನು ಸೂಚಿಸಿದರು. ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ಖಂಡೇರಾಯನಹಳ್ಳಿಯ ರುದ್ರಪ್ಪ ಮಾನಪ್ಪ ಲಮಾಣಿ ಮೂರು ಬಾರಿ ಶಾಸಕರಾಗಿ ಮತ್ತು ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ.











































































error: Content is protected !!
Scroll to Top