ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಇಂದು ಸಂಜೆ ಉಡುಪಿ ಜಿಲ್ಲೆಗೆ ಭೇಟಿ : ಮಳೆಹಾನಿ ಪರಿಶೀಲನೆ

ಉಡುಪಿ : ಮೂರು ನಾಲ್ಕು ದಿನಗಳಿಂದ ಭಾರಿ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಜು. 7ರಂದು ಸಂಜೆ ಭೇಟಿ ನೀಡಲಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಳೆಯಿಂದ ಹಾನಿಗೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿರುವರು. ಮೂರು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಕಡೆಗಳಲ್ಲಿ ಹಾನಿಯುಂಟಾಗಿದ್ದು, ಮೂವರು ಮೃತರಾಗಿರುವ ಕುರಿತಂತೆ ವರದಿಯಾಗಿದೆ.

ಜು. 6ರಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ, ಶುಕ್ರವಾರ ಬಜೆಟ್‌ ಮುಗಿದ ಬಳಿಕ ಉಡುಪಿಗೆ ಭೇಟಿ ನೀಡುವೆ. ಮಳೆಯಿಂದಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಮಳೆಹಾನಿ ಪರಿಹಾರಕ್ಕೆ ಆರ್ಥಿಕ ತೊಂದರೆ ಇಲ್ಲ ಎಂದು ಹೇಳಿದರು.





























































































































error: Content is protected !!
Scroll to Top