ಜೈನ ಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹ ಸಚಿವ ಪರಮೇಶ್ವರ್‌

ಹುಬ್ಬಳ್ಳಿ : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಸೋಮವಾರ ಭರವಸೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕೀಯ ತಾರತಮ್ಯ ಮಾಡುವುದಿಲ್ಲ.

ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು. ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ. ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯ ಇಲ್ಲ. ಗೃಹ ಇಲಾಖೆಯೇ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದರು.













































































error: Content is protected !!
Scroll to Top