ಸಾಲ ನೀಡಿ ಜನರಿಗೆ ಕಿರುಕುಳ : 42 ಆ್ಯಪ್ ಗಳ ರದ್ದುಪಡಿಸಿದ ಸರಕಾರ

ಬೆಂಗಳೂರು: ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ 42 ಮೊಬೈಲ್ ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ರದ್ದುಪಡಿಸಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ವಿಧಾನಪರಿಷತ್ತಿನಲ್ಲಿ ಸಾಲದ ಆ್ಯಪ್ ಗಳ ಕುರಿತು ಮಾತನಾಡಿದ ಬಿಜೆಪಿ ಎಂಎಲ್‌ಸಿ ಡಿ. ಎಸ್. ಅರುಣ್ ಅವರು, ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಹಣ ಸಾಲ ನೀಡುವ ಅಪ್ಲಿಕೇಶನ್‌ಗಳು ಜನರಿಗೆ ಕಿರುಕುಳ ನೀಡುತ್ತಿವೆ. ವಿಶೇಷವಾಗಿ ಗೇಮಿಂಗ್ ಅಪ್ಲಿಕೇಶನ್‌ಗಳು ಯುವಕರ ಶಿಕ್ಷಣ ಮತ್ತು ಜೀವನವನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು.

ಅಲ್ಲದೆ, ಈ ಗೇಮಿಂಗ್ ಆ್ಯಪ್ ಗಳಿಗೆ ಸೆಲೆಬ್ರಿಟಿಗಳು ಪ್ರಚಾರ ಮಾಡುತ್ತಿರುವುದು ಕಳವಳ ವಿಚಾರವಾಗಿದೆ, ಇದು ಯುವಜನರನ್ನು ಆನ್‌ಲೈನ್ ಜೂಜಿನಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಈ ವೇಳೆ ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇಂತಹ ಆ್ಯಪ್‌ಗಳ ಹಾವಳಿಯನ್ನು ತಡೆಯಲು ಸರಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಗೂಗಲ್ ಪ್ಲೇ ಸ್ಟೋರ್ ನಿಂದ 42 ಅಪ್ಲಿಕೇಶನ್ ಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಿದರು.













































































error: Content is protected !!
Scroll to Top