ಸಾರ್ವಜನಿಕರ ಕುಂದು ಕೊರತೆ ಕೇಳಲು ಹೊಸ ಟ್ವಿಟರ್ ಖಾತೆ ತೆರದ ಸಿಎಂ ಕಚೇರಿ

ಬೆಂಗಳೂರು : ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಮುಖ್ಯಮಂತ್ರಿ ಕಚೇರಿಯು ಹೊಸ ಟ್ವಿಟರ್‌ ಖಾತೆಯನ್ನು ಆರಂಭಿಸಿದೆ. ಸಾರ್ವಜನಿಕರು ಕುಂದು ಕೊರತೆಗಳನ್ನು ಈ ಟ್ವಿಟರ್‌ ಖಾತೆಗೆ ಟ್ಯಾಗ್‌ ಮಾಡಿ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳ ಗಮನಕ್ಕೆ ತರಬಹುದು.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಮಾಧ್ಯಮ ಮಾಹಿತಿ ನಿಡಲಾಗಿದೆ. ಸಾರ್ವಜನಿಕ ಕುಂದುಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರುವ ಉದ್ದೇಶದಿಂದ ಹೊಸ ಟ್ವಿಟರ್‌ ಖಾತೆಯನ್ನು ತೆರೆಯಲಾಗಿದೆ. ಸಾರ್ವಜನಿಕರಿಗೆ ನೆರವಾಗುವ ಉದ್ದೇಶವಾಗಿದೆ. ಹೀಗಾಗಿ,

https://twitter.com/osd_cmkarnataka – ಈ ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವೈಯಕ್ತಿಕ ಸಮಸ್ಯೆಗಳಿದ್ದರೆ ನೇರವಾಗಿ ಗಮನಕ್ಕೆ ತನ್ನಿ
ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಿಎಂ ಕಚೇರಿ ತಿಳಿಸಿದೆ.

ಸಾರ್ವಜನಿಕರಿಗೆ ಸಿಎಂ ಮಟ್ಟಕ್ಕೆ ತಮ್ಮ ಸಮಸ್ಯೆಗಳನ್ನು ಕೊಂಡೊಯ್ಯವುದು ದೊಡ್ಡ ಸವಾಲಾಗಿತ್ತು. ಮಾತ್ರವಲ್ಲದೇ, ಯಾರನ್ನು ಸಂಪರ್ಕಿಸಬೇಕು, ಯಾವ ವಿಧಾನದ ಮೂಲಕ ಸಂಪರ್ಕಿಸಬೇಕು ಎಂಬ ಗೊಂದಲಗಳಿದ್ದವು. ಇದರಿಂದ ಸಾಕಷ್ಟು ಸಾರ್ವಜನಿಕ ಸಮಸ್ಯೆಗಳು ಹಾಗೆಯೇ ಉಳಿದುಬಿಡುತ್ತಿದ್ದವು. ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯು ಇದಕ್ಕೊಂದು ವೇದಿಕೆ ಕಲ್ಪಿಸಿಕೊಟ್ಟಿದೆ. ಇದೊಂದು ಜನಸ್ನೇಹಿ ನಡೆಯಾಗಿದೆ ಎಂದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.







































































error: Content is protected !!
Scroll to Top