ಚರ್ಚೆಯ ಬಳಿಕ ತೀರ್ಮಾನ ಎಂದ ಸರಕಾರ
ಬೆಂಗಳೂರು: ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ಸರಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಸದನದಲ್ಲಿ ಮಾತನಾಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶಿಕ್ಷಕರಿಗೂ ಡ್ರೆಸ್ ಕೋಡ್ ಜಾರಿಗೆ ತರಬೇಕೆಂಬ ಪ್ರಸ್ತಾಪ ಇದೆ. ಈ ಕುರಿತು ಚರ್ಚೆ ನಡೆಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಶ್ನೋತರ ವೇಳೆಯಲ್ಲಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ಡ್ರೆಸ್ ಕೋಡ್‌ಗೆ ನಿಯಮಗಳಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜೊತೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ನ್ಯಾಯಾಲಯದ ಸ್ಟೇ ಇರುವ ಕಾರಣ 13,500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲು ಸಾಧ್ಯವಾಗಿಲ್ಲ. ಈ ಸಂಬಂಧ ಕಾನೂನು ತಜ್ಞರ ಜೊತೆಗೆ ಚರ್ಚಿಸಲಾಗಿದೆ. 900ಕ್ಕೂ ಹೆಚ್ಚು ವಿಶೇಷ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುವುದು, ರಾಜ್ಯದ 306 ಸರ್ಕಾರಿ ಪ್ರೌಢಶಾಲೆಗಳನ್ನು ಮೇಲ್ದರ್ಜೇಗೇರಿಸಿ, ಪದವಿ ಪೂರ್ವ ಶಿಕ್ಷಣಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.






































































