ಮಹಾರಾಷ್ಟ್ರ : ಆ. 1 ರಂದು ಲೋಕಮಾನ್ಯ ತಿಲಕ್ ಅವರ 103ನೇ ಪುಣ್ಯತಿಥಿಯಂದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ ಹಿಂದ್ ಸ್ವರಾಜ್ ಸಂಘವು ಜು. 10ರಂದು ಪ್ರಕಟನೆಯಲ್ಲಿ ತಿಳಿಸಿದೆ.
ಮೋದಿ ಅವರ ಸವ್ರೋಚ್ಛ ನಾಯಕತ್ವ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ದೇಶವು ಅಭಿವೃದ್ಧಿಯತ್ತ ಸಾಗುತ್ತಿದೆ. ದೇಶದ ಪ್ರಜೆಗಳಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆ. 1ರ ಸಮಾರಂಭದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಅವರು ಉಪಸ್ಥಿತರಿರುವರು ಎಂದು ಟ್ರಸ್ಟ್‌ನ ಅಧ್ಯಕ್ಷ ದೀಪಕ್ ತಿಲಕ್ ತಿಳಿಸಿದ್ದಾರೆ.


































































