ಬಿಜೆಪಿಯವರಿಂದ ಯಕ್ಷಗಾನದ ರಾಕ್ಷಸರಂತೆ ವರ್ತನೆ – ವೀರಪ್ಪ ಮೊಯ್ಲಿ ಬಣ್ಣನೆ

ಭಸ್ಮಾಸುರನಂತೆ ಅವನತಿ ಹೊಂದುವ ಕಾಲ ದೂರವಿಲ್ಲ

ಕಾರ್ಕಳ : ಯಕ್ಷಗಾನದಲ್ಲಿ ಬರುವ ರಾಕ್ಷಸರಂತೆ ಬಿಜೆಪಿಗರು ವರ್ತಿಸುತ್ತಿದ್ದು, ತಮ್ಮನ್ನೇ ನಾಶಗೊಳಿಸುವಂತಹ ಭಸ್ಮಾಸುರನ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಇದು 2024 ರಲ್ಲಿ ಅವರಿಗೆ ತಿರುಗುಬಾಣವಾಗಲಿದೆ. ಬಿಜೆಪಿಯ ಅವನತಿಯ ಕಾಲ ಹತ್ತಿರದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.
ಅವರು ಜು. 12ರಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್‌ ಗಾಂಧಿಯವರ ತೇಜೋವಧೆಯನ್ನು ವಿರೋಧಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಬಾಯಿಗೆ ಕಪ್ಪು ಪಟ್ಟಿ ಧರಿಸಿ ನಡೆಸಿದ ಮೌನ ಧರಣಿ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದರು. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರಕಾರ ಕಾಂಗ್ರೆಸ್‌ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ವೀರಪ್ಪ ಮೊಯ್ಲಿ ಕಿಡಿ ಕಾರಿದರು.


ಕಾಂಗ್ರೆಸ್‌ ಮುಖಂಡ ಉದಯ್‌ ಕುಮಾರ್‌ ಶೆಟ್ಟಿ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಡಿ.ಆರ್.‌ ರಾಜು, ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಜಿತ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಡಿಸೋಜಾ, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಕಾಂತಿ, ಪಕ್ಷದ ಪ್ರಮುಖರಾದ ಸುಭೀತ್‌ ಎನ್.‌ ಆರ್‌, ಅಶ್ಫಕ್‌ ಅಹಮದ್, ಸುಧಾಕರ್ ಕೋಟ್ಯಾನ್, ಮಾಲಿನಿ ರೈ, ಪ್ರತಿಮಾ ರಾಣೆ ಮೊದಲಾದವರು ಉಪಸ್ಥಿತರಿದ್ದರು.













































































error: Content is protected !!
Scroll to Top