ಮಂಗಳೂರು : ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ನುಗ್ಗಿದ ಕಳ್ಳರು ಎರಡು ಕಾರುಗಳನ್ನು ಕಳವುಗೈದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಜಂಕ್ಷನ್ ಬಳಿ ಜು. 12 ರ ತಡರಾತ್ರಿ ಸಂಭವಿಸಿದೆ.
ಅಬಿದ್ ಅಹಮ್ಮದ್ ಸುರಲ್ಪಾಡಿ ಮಾಲಿಕತ್ವದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಯಲ್ಲಿ ಕಳ್ಳತನ ನಡೆದಿದ್ದು ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಮುಂದಿನ ಗಾಜಿನ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ತಡರಾತ್ರಿ ಕಚೇರಿಗೆ ಒಳನುಗ್ಗಿದ ಕಳ್ಳರು ಕಚೇರಿಯಲ್ಲಿ ಹುಡುಕಾಡಿ ಡ್ರಾವರ್ ನಲ್ಲಿದ್ದ ಕಾರುಗಳ ಕೀ ಪಡೆದು ಹಾಗೂ ಕಾರಿನ ಕಾಗದ ಪತ್ರದ ಜೊತೆಗೆ ಎರಡು ಕಾರುಗಳನ್ನು ಕಳವುಗೈದಿದ್ದಾರೆ. 6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಹಾಗೂ 9 ಲಕ್ಷ ಮೌಲ್ಯದ ಕ್ರೇಟಾ ಕಾರು ಸೇರಿ ಒಟ್ಟು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನವಾಗಿದೆಯೆಂದು ಅಂದಾಜಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







































