ಜು. 17 : ಕಾರ್ಕಳದಲ್ಲಿ ವಿಶ್ವ ಕುಂದಾಪ್ರ ದಿನಾಚರಣೆ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಕಾರ್ಕಳದ ಕುಂದಾಪ್ರದವರ್ ಬಳಗದ ಸಹಯೋಗದಲ್ಲಿ ಜು. 17 ರಂದು ಪ್ರಕಾಶ್ ಹೋಟೆಲ್‌ನ ಉತ್ಸವ ಸಭಾಂಗಣದಲ್ಲಿ ಸಂಜೆ 4.30ಕ್ಕೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜರುಗಲಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಕಳ ರಂಗ ಸಂಸ್ಕೃತಿಯ ಅಧ್ಯಕ್ಷ ನಿತ್ಯಾನಂದ ಪೈ, ಜನಪದ ಕಲಾವಿದ ನಾಗರಾಜ್ ಪಾಣಾರ, ಖ್ಯಾತ ಸಾಹಿತಿ ಓಂ ಗಣೇಶ್ ಉಪ್ಪುಂದ, ರಂಗಭೂಮಿ ಕಲಾವಿದೆ ಪ್ರತಿಮಾ ನಾಯಕ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top