ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಮುಂದಿನ ತಿಂಗಳು ಬರಲಿದೆ ಫಲಾನುಭವಿಗಳ ಖಾತೆಗೆ ಹಣ

ಬೆಂಗಳೂರು: ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 4-5 ದಿನಗಳಲ್ಲಿ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಯೋಜನೆಗೆ ನೋಂದಣಿ ತೆರೆಯಲು ಶೀಘ್ರದಲ್ಲೇ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಮತ್ತು ಸರಕಾರ ಆಗಸ್ಟ್ 16 ಅಥವಾ 17 ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂ. ಜಮೆ ಮಾಡಲಿದೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಲು ನಾವು ತೆರೆದಿರುವ ಸಹಾಯವಾಣಿಯ ಮೂಲಕ ಹೆಚ್ಚಿನ ಸಂಖ್ಯೆಯ ಕರೆಗಳು ಬರುತ್ತಿದ್ದು, ಜನರು ವಿಚಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಯೋಜನೆಗೆ ವಾರ್ಷಿಕ 30 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಅಂದಾಜಿಸಲಾಗಿದ್ದು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 17,500 ಕೋಟಿ ಮೀಸಲಿಡಲಾಗಿದೆ ಎಂದರು. ಈ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಈ ಯೋಜನೆಯಿಂದ ಕರ್ನಾಟಕದ 1.30 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದರು.















































































































































error: Content is protected !!
Scroll to Top