ಗೃಹಲಕ್ಷ್ಮೀ ಯೋಜನೆಗೆ ಜು.19ರಿಂದ ಅರ್ಜಿ ಸಲ್ಲಿಕೆ; ಕೊನೆಯ ದಿನಾಂಕವಿಲ್ಲ

ಆ. 17ರಿಂದ ಆಧಾರ್‌ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ಹಣ ಜಮೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜು. 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಇಂದು ಮಧ್ಯಾಹ್ನ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಿದ್ದಾರೆ ಎಂದರು.
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಸಿಗಲಿದೆ.































































































































error: Content is protected !!
Scroll to Top