ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಪರೀಕ್ಷಾ ದಿನಾಂಕ ಮತ್ತು ಇನ್ನಿತರ ಮಾಹಿತಿಯನ್ನು ನೀಡಿದೆ.

ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜು. 14 ರಿಂದ ಆ. 15 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಟಿಇಟಿ-2022ರ ಪರೀಕ್ಷೆಗೆ ( KARTET-2022 Exam) ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ, ವಯೋಮಿತಿ ಸೇರಿದಂತೆ ವಿವಿಧ ಮಾಹಿತಿಗಳಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಸೂಚಿಸಿದೆ.





























































































error: Content is protected !!
Scroll to Top