ಕಾರ್ಕಳ : ತೆಳ್ಳಾರು ಪ್ರೌಢಶಾಲೆಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಮಕ್ಕಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಜು. 15ರಂದು ಕ್ರೀಡಾ ಸಮವಸ್ತ್ರ ಮತ್ತು ಐ.ಡಿ. ಕಾರ್ಡ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಕಂಪ್ಯೂಟರ್ ತರಗತಿಗೆ ಸ್ವಯಂಸೇವಾ ಸಂಸ್ಥೆ ಬೆಂಗಳೂರು ಹಾಗೂ ವಿನಮೆನ್ ಸಂಸ್ಥೆ ಮಂಗಳೂರು ವತಿಯಿಂದ ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಇದೇ ಸಂದರ್ಭ ನಡೆದ ಪೋಷಕರ ಸಭೆಯಲ್ಲಿ ಮಳೆಗಾಲದಲ್ಲಿ ಉಂಟಾಗುವ ರೋಗಗಳು ಮತ್ತು ಮುನ್ನೆಚ್ಚರಿಕೆ ಕುರಿತು ಡಾ. ಪ್ರಕಾಶ್ ಶೆಟ್ಟಿ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸ್ಮಿತಾ ಭಂಡಾರಿ ಶಾಲಾ ಶೈಕ್ಷಣಿಕ ವಿಷಯಗಳ ಕುರಿತು ಮಾಹಿತಿ ನೀಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಮಾಂಜ, ಎಸ್‌ಡಿಎಮ್‌ಸಿ ಅಧ್ಯಕ್ಷ ಆದರ್ಶ ಜೈನ್, ನಿತಿನ್ ಮತ್ತು ಎಸ್‌ಡಿಎಮ್‌ಸಿ ಸದಸ್ಯರು ಉಪಸ್ಥಿತರಿದ್ದರು. ರೇಖಾ ಸ್ವಾಗತಿಸಿ, ಶಿವರಾಜ್ ಕಾರ್ಯಕ್ರಮ ನಿರೂಪಿಸಿದರು. ಪ್ರಣೀಲಾ ವಂದಿಸಿದರು.
























