ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಶರಣಾಗಲು ಆರೋಪಿಗಳಿಗೆ ಇನ್ನೊಂದು ಗಡು

ಆ.18ರೊಳಗೆ ಶರಣಾಗದಿದ್ದರೆ ಐವರು ಅರೋಪಿಗಳ ಆಸ್ತಿ ಜಪ್ತಿ

ಮಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಆ.18ರೊಳಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಎರಡನೇ ಬಾರಿ ಎಚ್ಚರಿಕೆ ನೀಡಿದೆ. ಎನ್‌ಐಎ ಕೋರ್ಟ್‌ನ ಆದೇಶದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅದೇ ರೀತಿಯಾಗಿ ಆರೋಪಿಗಳ ಸುಳಿವು ನೀಡಿದರೆ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಈ ಹಿಂದೆ ಜೂನ್‌ 30ರಂದು ಶರಣಾಗುವಂತೆ ಎಚ್ಚರಿಕೆ ನೀಡಲಾಗಿತ್ತು. ಆದರೂ ಶರಣಾಗದೆ ತಲೆಮರೆಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಆಗಸ್ಟ್ 18ರೊಳಗೆ ಶರಣಾಗುವಂತೆ ಧ್ವನಿವರ್ಧಕ ಮೂಲಕ ಅನೌನ್ಸ್‌ ಮಾಡಿದ್ದಾರೆ. ಶರಣಾಗದಿದ್ರೆ ಆರೋಪಿಗಳ ಮನೆ, ಆಸ್ತಿಪಾಸ್ತಿ ಮುಟ್ಟುಗೋಲು ಎಚ್ಚರಿಕೆ ನೀಡಲಾಗಿದೆ.
ಆರೋಪಿಗಳ ಮನೆಗೆ ಭೇಟಿ ನೀಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಜತೆಗೆ ಆರೋಪಿಗಳ ಮನೆಗೆ ಕೋರ್ಟ್‌ನ ಆದೇಶ ಪ್ರತಿ ಕೂಡ ಅಂಟಿಸಿದ್ದಾರೆ. ಮುಸ್ತಫಾ ಪೈಚಾರ್, ಅಬೂಬಕ್ಕರ್ ಸಿದ್ದಿಕ್, ಉಮ್ಮರ್ ಫಾರೂಕ್​ ತುಫೇಲ್, ಮಸೂದ್ ಅಗ್ನಾಡಿ ಸೇರಿ ಇನ್ನಿತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.
ಜುಲೈ 26, 2022 ರಂದು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಪ್ರಕರಣದ ಬಿಸಿಗೆ ಬಿಜೆಪಿ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ವಹಿಸಿತ್ತು

















































error: Content is protected !!
Scroll to Top