ಕಾಂಗ್ರೆಸ್ ಆಡಳಿತದಲ್ಲಿ ಕೊಲೆಗಳು ನಡೆಯುತ್ತವೆ ಎಂಬ ಆರೋಪಕ್ಕೆ ತಿರುಗೇಟು
ಮಂಗಳೂರು: ಹಿಂದಿನ ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ. ರಮಾನಾಥ್ ರೈ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸುತ್ತಿದ್ದಾರೆ. ಕಟೀಲು ತಪ್ಪು ಮಾಹಿತಿ ರವಾನಿಸಿ ಕೊಲೆಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ ಎಂಬ ಭಾವನೆ ಮೂಡಿಸಲು ಯತ್ನಿಸುತ್ತಿದ್ದಾರೆ.ಆದರೆ ಯಾವುದೇ ಕಾಂಗ್ರೆಸ್ ನಾಯಕರು ಎಲ್ಲಿಯೂ ಕೋಮು ಪ್ರಚೋದನಕಾರಿ ಭಾಷಣ ಮಾಡಿಲ್ಲ ಎಂದು ರೈ ಹೇಳಿದ್ದಾರೆ.
ಬಿಜೆಪಿಯಿಂದ ಉಂಟಾಗಿರುವ ಗೊಂದಲ ನಿವಾರಣೆಗೆ ಹರೀಶ್ ಪೂಜಾರಿ, ವಿನಾಯಕ ಬಾಳಿಗ, ಜಲೀಲ್ ಕರೋಪಾಡಿ, ದೀಪಕ್, ಪ್ರವೀಣ್ ನೆಟ್ಟಾರು, ಫಾಜಿಲ್, ಮಸೂದ್ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಕೋಮು ಹತ್ಯೆಗಳ ಬಗ್ಗೆ ಎಸ್ಐಟಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.






























































