ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಜು. 19ರಂದು ತಾಲೂಕು ಪ್ರವಾಸಿ ಮಂದಿರದಲ್ಲಿ ಜರುಗಿದ ಪತ್ರಕರ್ತರ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಆಚಾರ್ಯ, ಕೋಶಾಧಿಕಾರಿಯಾಗಿ ಕೆ. ಎಂ. ಖಲೀಲ್, ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆ ಕಾರ್ಯದರ್ಶಿ – ವಾಸುದೇವ ಭಟ್, ಕ್ರೀಡಾ ಕಾರ್ಯದರ್ಶಿ – ರಮಾನಂದ ಅಜೆಕಾರು, ಸಾಂಸ್ಕೃತಿಕ ಕಾರ್ಯದರ್ಶಿ – ಹರಿಪ್ರಸಾದ್ ನಂದಳಿಕೆಯವರನ್ನು ಆಯ್ಕೆ ಮಾಡಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಹಾಗೂ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್, ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ
































































