ಎದೆನೋವಿನಿಂದ ಅಸ್ವಸ್ಥಗೊಂಡು ವ್ಯಕ್ತಿ ಸಾವು

ಕಾರ್ಕಳ : ಎದೆನೋವಿನಿಂದ ಅಸ್ವಸ್ಥಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜು. 19 ರಂದು ನಿಟ್ಟೆ ಕಲ್ಲಂಬಾಡಿ ಪದವಿನಲ್ಲಿ ಸಂಭವಿಸಿದೆ. ಉಮೇಶ್ (38) ಎಂಬವರೇ ಮೃತ ದುರ್ದೈವಿ. ಇವರು ಲೆಮಿನಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬುಧವಾರ ರಜೆ ಇದ್ದ ಕಾರಣ ಮನೆಯಲ್ಲೇ ಇದ್ದರು. ಸಂಜೆಯ ವೇಳೆಗೆ ಎದೆನೋವಿನಿಂದ ಅಸ್ವಸ್ಥಗೊಂಡಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಉಮೇಶ್‌ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರರನ್ನು ಅಗಲಿದ್ದಾರೆ.















































































error: Content is protected !!
Scroll to Top