ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಆತ್ಮಹತ್ಯೆ

ಡಿಪೋ ಮ್ಯಾನೇನರ್‌ ಕಿರುಕುಳ ಎಂಬ ಆರೋಪ

ಕೋಲಾರ: ಮಂಡ್ಯದಲ್ಲಿ ಕಂಡಕ್ಟರ್​ ಒಬ್ಬರು ಡೊಪೋದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆನಪಿನಿಂದ ಮರೆಯಾಗುವ ಮೊದಲೇಇದೀಗ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ‌. ಆವರು ಇತ್ತೀಚೆಗೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು. ಕೆಲಸದ ಒತ್ತಡದ ಹೆಚ್ಚುತ್ತಿದೆ, ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಇಂದು ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.































































error: Content is protected !!
Scroll to Top