ವಿದ್ಯಾರ್ಥಿಗಳು ಓದು- ಬರೆಯುವ ಹವ್ಯಾಸ ಬೆಳೆಸಿಕೊಳ್ಳಿ – ರಕ್ಷಿತಾ ಕುಮಾರಿ

ಕಾರ್ಕಳ : ವಿದ್ಯಾರ್ಥಿಗಳು ಓದುವ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇಂತಹ ಹವ್ಯಾಸಗಳು ಜ್ಞಾನಸಂಪಾದನೆ ಜೊತೆಗೆ ನಮ್ಮನ್ನು ಉನ್ನತ ಸ್ಥಾನಕ್ಕೇರಿಸುವುದು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ವಿಭಾಗ ಮುಖ್ಯಸ್ಥೆ ರಕ್ಷಿತಾ ಕುಮಾರಿ ಟಿ.ಡಿ. ಹೇಳಿದರು.

ಅವರು ಜು. 21ರಂದು ಕಾರ್ಕಳ ಕ್ರೈಸ್ಟ್‌ಕಿಂಗ್‌ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವರದಿ ಮಾಡುವ ತುಡಿತವಿದ್ದಲ್ಲಿ ಯಾರು ಬೇಕಾದರೂ ಪತ್ರಕರ್ತರಾಗಬಹುದು. ಅದಕ್ಕೆ ಡಿಗ್ರಿಯ ಅಗತ್ಯವಿರುವುದಿಲ್ಲ. ನ್ಯೂಸ್‌ ಹುಡುಕುವ ಹಸಿವು ಇರಬೇಕು ಎಂದು ಅಭಿಪ್ರಾಯಪಟ್ಟ ರಕ್ಷಿತಾ ಪತ್ರಿಕೋದ್ಯಮದಲ್ಲಿ ಅಗಾಧವಾದ ಅವಕಾಶಗಳಿವೆ. ವಿದ್ಯಾರ್ಥಿಗಳು ಕೂಡಾ ಪತ್ರಿಕೋದ್ಯಮದ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.

ಸನ್ಮಾನ
ಹಿರಿಯ ಪತ್ರಕರ್ತ ಮೊಹಮ್ಮದ್ ಷರೀಫ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಪತ್ರಕರ್ತರು ಮೈಯೆಲ್ಲಾ ಕಣ್ಣಾಗಿ ಕಾರ್ಯನಿರ್ವಹಿಸಬೇಕು. ಯುವಕರು ಪತ್ರಿಕೋದ್ಯಮದ ಕುರಿತು ಆಸಕ್ತಿ ಹೊಂದುವಂತಾಗಬೇಕೆಂದರು.
ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜಾ, ಉಪ ಪ್ರಾಚಾರ್ಯ ಡಾ. ಪ್ರಕಾಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೇಯಸ್ ಸ್ವಾಗತಿಸಿ, ಚರಣ್‍ರಾಜ್ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.





























































































































error: Content is protected !!
Scroll to Top