ಹಿರಿಯಡ್ಕ : ಖಾಸಗಿ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಜು. 22 ರಂದು ಓಂತಿಬೆಟ್ಟು ಬಳಿ ಸಂಭವಿಸಿದೆ. ಕೃಷ್ಣ ಪೂಜಾರಿ (60) ಎಂಬವರೇ ಮೃತ ವ್ಯಕ್ತಿ.
ಕೃಷ್ಣ ಪೂಜಾರಿ ಅವರು ಭೋಜ ಶೆಟ್ಟಿಯವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಹಿರಿಯಡ್ಕದಿಂದ ಉಡುಪಿ ಕಡೆಗೆ ಸಾಗುತ್ತಿದ್ದಾಗ, ಉಡುಪಿಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಓಂತಿಬೆಟ್ಟು ಬಳಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕೃಷ್ಣ ಪೂಜಾರಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸಹಸವಾರ ನಿವೃತ್ತ ಬ್ಯಾಂಕ್ ಉದ್ಯೋಗಿ ಭೋಜ ಶೆಟ್ಟಿ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಕೃಷ್ಣ ಪೂಜಾರಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.










































