ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ
ಮಂಗಳೂರು: ನೈತಿಕ ಪೊಲೀಸ್‌ಗಿರಿ ಮತ್ತು ಗೋ ರಕ್ಷಣೆ ಮಾಡುವುದನ್ನು ತಡೆಯುವ ಸಲುವಾಗಿ ಮಂಗಳೂರಿನಲ್ಲಿ ಪೊಲೀಸರು ಮತೀಯ ಹಿಂಸಾಚಾರ ತಡೆ ವಿಭಾಗ ಸ್ಥಾಪಿಸಿ ಹಲವು ಹಿಂದು ಕಾರ್ಯಕರ್ತರನ್ನು ಗಡಿಪಾರು ಮಾಡಲು ಸಿದ್ಧತೆ ನಡೆಸಿರುವಂತೆಯೇ ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆಯಾದ ಬಗ್ಗೆ ದೂರು ದಾಖಲಾಗಿದ್ದು, ಬೀಚ್ ತೆರಳಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಬಂದು ತಂಡವೊಂದು ಹಲ್ಲೆ ನಡೆಸಿದೆ.
ಮಂಗಳೂರಿನ ಪ್ರತಿಷ್ಠಿತ ಎಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೆಜ್ಮೆಂಟ್ ಕೋರ್ಸ್ ಸಂಸ್ಥೆ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದರು. ವಿದ್ಯಾರ್ಥಿನಿಯರು ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಬೀಚ್ ನಿಂದ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಹಫೀಸ್ (20) ಮೇಲೆ ಬಿಜೈ ಕಾಪಿಕಾಡ್‌ನಲ್ಲಿ ಹಲ್ಲೆ ನಡೆಸಿದೆ. ಗಾಯಗೊಂಡ ವಿದ್ಯಾರ್ಥಿ ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.































































