ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸರಕಾರ ಚಿಂತನೆ

ಅಣೆಕಟ್ಟೆ ಬತ್ತುತ್ತಿದ್ದರೂ ನೀರು ಹರಿಸುವ ಅನಿವಾರ್ಯತೆಯಿದೆ ಎಂದು ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಾಗಿ ಅಣೆಕಟ್ಟೆಗಳು ಬತ್ತುತ್ತಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸರಕಾರ ನಿರ್ಧರಿಸಿದೆ. ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿ ಸಾಕಾಗುವಷ್ಟು ನೀರಿಲ್ಲ. ಕೆಲವು ದಿನಗಳಲ್ಲಿ ನದಿ ಪ್ರದೇಶಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪನ್ನು ನಾವು ಗೌರವಿಸಬೇಕು. ನಮ್ಮ ರಾಜ್ಯದಲ್ಲಿ ಸಮರ್ಪಕವಾದ ಮಳೆಯಾಗಿಲ್ಲ, ಆದರೂ ನಾವು ಪ್ರಾಧಿಕಾರದ ತೀರ್ಪನ್ನು ಗೌರವಿಸಬೇಕಿದೆ. ನಮ್ಮಲ್ಲಿರುವ ನೀರನ್ನು ಹರಿಸಲು ಚಿಂತನೆ ನಡೆಸಿದ್ದೇವೆ ಎಂದು ನೀರು ಬಿಡುವ ಕುರಿತು ಜಲ ಶಕ್ತಿ ಸಚಿವರಿಗೆ ತಮಿಳುನಾಡಿನ ಪತ್ರದ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕುಡಿಯುವ ನೀರನ್ನು ಇಟ್ಟುಕೊಳ್ಳದೆ ನಾವು ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ. ಕುಡಿಯುವ ನೀರನ್ನು ಗಮನದಲ್ಲಿಟ್ಟುಕೊಂಡು ನೀರು ಬಿಡಲು ಯೋಚಿಸುತ್ತೇವೆ. ಕಳೆದ 3 ವರ್ಷಗಳಲ್ಲಿ ಚೆನ್ನಾಗಿ ಮಳೆಯಾಗಿತ್ತು. ಆದರೆ ಈ ವರ್ಷ ಆಗಿಲ್ಲ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸದೇ ಇದ್ದರೆ, ಕಟಾವಿಗೆ ಬಂದಿರುವ ಕರುವೈ ಬೆಳೆ ಹಾಳಾಗುತ್ತದೆ ತಕ್ಷಣವೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ತಮಿಳುನಾಡು ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದಿತ್ತು.





























































































































error: Content is protected !!
Scroll to Top