ಆಗಸ್ಟ್‌ 1ರಿಂದ ಹಾಲಿನ ಬೆಲೆ 3 ರೂ. ಏರಿಕೆ

ಬೆಂಗಳೂರು: ಆಗಸ್ಟ್‌ 1ರಿಂದ ನಂದಿನಿ ಹಾಲಿನ ಬೆಲೆ ಕೂಡ ಏರಿಕೆಯಾಗಲಿದೆ. ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲು ನಿನ್ನೆ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ ನಡೆದ ಸಭೆಯಲ್ಲಿ ಹಾಲಿನ ಬೆಲೆ ಹೆಚ್ಚಿಸಲು ಸರಕಾರ ಅನುಮತಿ ನೀಡಿದೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಕೆಎಂಎಫ್ ಪ್ರತಿ ಲೀಟರ್‌ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂ.ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂ. ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.





























































































































error: Content is protected !!
Scroll to Top