ಬೀಚ್ಗೆ ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ
ಮಂಗಳೂರು: ಬೀಚ್‌ಗೆ ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಲಾಯ್ಡ್ ಪಿಂಟೋ(32) ಮತ್ತು ದೀಕ್ಷಿತ್ ಸೆರೆಯಾದವರು.
ಶುಕ್ರವಾರ ಸಂಜೆ ಪಣಂಬೂರು ಬೀಚ್‌ಗೆ ಹಿಂದು ಯುವತಿಯರೊಂದಿಗೆ ಹೋಗಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮೇಲೆ ಮಂಗಳೂರಿನಲ್ಲಿ ಹಲ್ಲೆ ಮಾಡಲಾಗಿತ್ತು. ಇಬ್ಬರು ಹುಡುಗರು ಮತ್ತು ನಾಲ್ವರು ಹುಡುಗಿಯರನ್ನು ದ್ವಿಚಕ್ರವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ತಂಡ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದು ವಿದ್ಯಾರ್ಥಿ ಮಹಮ್ಮದ್ ಹಫೀಸ್(20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು.
ಗಾಯಗೊಂಡ ಹಫೀಜ್ ಪೊಲೀಸರಿಗೆ ದೂರು ನೀಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದು ವರದಿಯಾಗಿತ್ತು.






























































