ಪತ್ರಕರ್ತರಿಗೆ ಸ್ವಚ್ಛ ಮನಸ್ಸು ಮುಖ್ಯ‌ : ಕುರಿಯನ್

ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಶಿಕ್ಷಕ-ರಕ್ಷಕರ ಸಭೆ

ಮೂಡುಬಿದಿರೆ : ಮಾಧ್ಯಮದಲ್ಲಿ ವೃತಿ ಬದುಕು ಕಂಡುಕೊಳ್ಳುವವರಿಗೆ ಸ್ವಚ್ಛ ಮನಸ್ಸು ಮುಖ್ಯ. ನಿರ್ಮಲ ಮನಸ್ಸಿನಿಂದ ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿಯನ್ನು ಪತ್ರಕರ್ತ ಹೊಂದಿರಬೇಕು. ಪತ್ರಕರ್ತನ ಕರ್ತವ್ಯದಲ್ಲಿ ಒಳಿತು-ಕೆಡುಕುಗಳೆರಡೂ ಅಡಕವಾಗಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು.
ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಶಿಕ್ಷಕ-ರಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ. ವಿದ್ಯಾರ್ಥಿ ಮೇಲೆ ಶಿಕ್ಷಕರು ತೋರಿಸುವ ವಿಶ್ವಾಸ ಆ ವಿದ್ಯಾರ್ಥಿ ಮೇಲಿನ ನಂಬಿಕೆಯನ್ನು ಸೂಚಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ವಿಶ್ವಾಸಾರ್ಹತೆ ಗಳಿಸುವುದು ಮುಖ್ಯ ಎಂದರು.
ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಆಳ್ವಾಸ್ ಎಂದರೆ ವಿದ್ಯಾಸಾಗರ. ಇಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಅವಕಾಶವೂ ಅಧಿಕ. ತಮ್ಮ ಮಕ್ಕಳು ಆಳ್ವಾಸ್‍ನಲ್ಲಿ ಕಲಿಯಬೇಕು ಎಂಬ ಹಂಬಲ ಹಲವರದ್ದು ಎಂದರು. ಪತ್ರಿಕೋದ್ಯಮ ವಿಭಾಗ ಹಾಗೂ ವಿದ್ಯಾರ್ಥಿಗಳ ಕಾರ್ಯನಿರ್ವಹಿಸುವ ರೀತಿ ನಿಜಕ್ಕೂ ಪ್ರಶಂಸಾರ್ಹ ಧನ್ಯರು ಎಂದರು.
ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ ಪಿ. ಆರ್. ವಂದಿಸಿದರು. ವಿದ್ಯಾರ್ಥಿ ಅವಿನಾಶ್ ಕಟೀಲ್ ಹಾಗೂ ಪ್ರಖ್ಯಾತ ಭಂಡಾರಿ ನಿರೂಪಿಸಿದರು.









































error: Content is protected !!
Scroll to Top